Friday, May 17, 2024
Homeಕರಾವಳಿಕಲ್ಲೇಗ ಟೈಗರ್ಸ್ ರೂವಾರಿ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಕಲ್ಲೇಗ ಟೈಗರ್ಸ್ ರೂವಾರಿ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಪುತ್ತೂರು; ನಿನ್ನೆ ತಡರಾತ್ರಿ ನಡೆದ ಕಲ್ಲೇಗ ಟೈಗರ್ಸ್ ರೂವಾರಿ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಮಂಜುನಾಥ್​, ಚೇತನ್​ ಮತ್ತು ಮನೀಶ್ ಬಂಧಿತ ಆರೋಪಿಗಳು. ಅಕ್ಷಯ್‌ ಕಲ್ಲೇಗ (24) ಅವರನ್ನು ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ  ಬರ್ಬರವಾಗಿ ಹತ್ಯೆಗೈದಿದೆ.ಅಕ್ಷಯ್ ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್‌ ಎಂಬ ಹುಲಿ ವೇಷ ತಂಡವನ್ನು ಅವರು ಮುನ್ನಡೆಸುತ್ತಿದ್ದರು. ನಿನ್ನೆ ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್‌ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರ ನಷ್ಟದ ಬಾಬ್ತು ಮಾತನಾಡಲೆಂದು ಪುನ: ಅದೇ ತಂಡ ಅಕ್ಷಯ್‌ ನನ್ನು ರಾತ್ರಿ ವೇಳೆ ನೆಹರೂ ನಗರ ಬಳಿ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಕೇವಲ 2 ಸಾವಿರ ರೂಪಾಯಿಗಾಗಿ ಕೊಲೆ ನಡೆದಿದೆ ಎಂಬ ಮಾತು ಕೇಳಿ ಬಂದಿದೆ.  ರಾತ್ರಿ 11.30 ಗಂಟೆ ಸುಮಾರಿಗೆ ಕೊಲೆ ನಡೆದಿದೆ ಎನ್ನಲಾಗುತ್ತಿದೆ.ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ತುಸು ದೂರದಲ್ಲಿರುವ ಕೆನರಾ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್‌ ಮೇಲೆ ತಂಡ ದಾಳಿ ನಡೆಸಿದ್ದು, ಅಲ್ಲಿಂದ ಅವರನ್ನು ಅಟ್ಟಾಡಿಸಿಕೊಂಡು ಬಂದು ತಲಾವರಿನಿಂದ ದಾಳಿ ನಡೆಸಿದ್ದಾರೆ. ಎಟಿಎಂ ಬಳಿಯಿಂದ ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಆಚೆ ಬದಿ ಗಿಡಗಂಟಿಗಳಿಂದ ಅವೃತ್ತವಾದ ಜಾಗದವರೆಗೂ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮಾಣಿ ಮೈಸೂರು ಹೆದ್ದಾರಿಯ ಒಂದು ಬದಿಯಿಂದ ಇನ್ನೊಂದು ಬದಿಯವರೆಗೆ ರಕ್ತದ ಕಲೆಗಳಿವೆ.ಅಕ್ಷಯ್‌ ಮೃತದೇಹ ಕಾಲೇಜಿಗೆ ಹೋಗುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಹೆದ್ದಾರಿಯ ಅಂಚಿನಲ್ಲಿರುವ ಹಡೀಲು ಬಿದ್ದ ಜಾಗದಲ್ಲಿ ಬಿದ್ದು ಕೊಂಡಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!