Friday, June 5, 2026
Homeಕರಾವಳಿಅಕ್ಷಯ್ ಕಲ್ಲೇಗ ವಿರುದ್ಧವೂ ಹಲವು ಪ್ರಕರಣ ದಾಖಲಾಗಿತ್ತು; ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ...

ಅಕ್ಷಯ್ ಕಲ್ಲೇಗ ವಿರುದ್ಧವೂ ಹಲವು ಪ್ರಕರಣ ದಾಖಲಾಗಿತ್ತು; ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ ಬಿ ಹೇಳಿಕೆ

- Advertisement -
- Advertisement -

ಪುತ್ತೂರು: ಕಲ್ಲೇಗ ಟೈಗರ್ ರೂವಾಕಿ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯಿಸಿದ್ದಾರೆ.

ಕೊಲೆ ಪ್ರಕರಣದ ತನಿಖೆಗೆ ಸಂಬಂಧಪಟ್ಟಂತೆ ಇನ್ನಷ್ಟು ಮಾಹಿತಿ ನೀಡಿದ ಅರು ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದಿದ್ದಾರೆ. 
ಸದ್ಯದ ವಿಚಾರಣೆಯಲ್ಲಿ ತಿಳಿದು ಬಂದಿರುವುದು ಅಪಘಾತದ ವಿಚಾರಕ್ಕೆ ನಡೆದ ಗಲಾಟೆಗೆ ಹತ್ಯೆಯಾಗಿದೆ ಎಂಬ ಮಾಹಿತಿ ಇದೆ ಎಂದರು. ಕೊಲೆ ಮಾಡಿದ ಆರೋಪಿಗಳೆಲ್ಲರೂ ಅಕ್ಷಯ್ ಕಲ್ಲೇಗ ಅವರ ಪರಿಚಯಸ್ಥರೇ ಎಂದರು. ಇನ್ನು ಹಳೇ ವೈಷಮ್ಯದಿಂದ ಅಕ್ಷಯ್ ಕಲ್ಲೇಗ ಹತ್ಯೆ ನಡೆಯಿತಾ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಅಲ್ಲದೆ ಹತ್ಯೆಯ ಹಿಂದೆ ಬೇರೇ ಏನಾದರು ಕಾರಣವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು. ಇನ್ನು ಹತ್ಯೆಯಾಗಿರುವ ಅಕ್ಷಯ್ ಕಲ್ಲೇಗ ಓರ್ವ ರೌಡಿ ಶೀಟರ್ ಆಗಿದ್ದು ಆತನ ವಿರುದ್ಧವೂ ಹಲವು ಪ್ರಕರಣ ದಾಖಲಾಗಿತ್ತು ಎಂದರು.

- Advertisement -

Latest News

error: Content is protected !!