Wednesday, April 14, 2021
Home ತಾಜಾ ಸುದ್ದಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಕೊರೋನಾ ಪಾಸಿಟಿವ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಮುಂಬೈ: ಕೊರೋನಾ ಎರಡನೇ ಅಲೆ ಎದ್ದ ನಂತರ ಹಲವು ಸೆಲೆಬ್ರಿಟಿಗಳು, ಪ್ರಮುಖ ವ್ಯಕ್ತಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಳ್ಳುತ್ತಿದೆ. ಬಾಲಿವುಡ್ ನಲ್ಲಿ ಈಗಾಗಲೇ ಹಲವು ನಟ, ನಟಿಯರಿಗೆ ಕೊರೋನಾ ಬಂದು ಕ್ವಾರಂಟೈನ್ ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ನಟ ಅಕ್ಷಯ್ ಕುಮಾರ್ ಗೆ ಕೂಡ ಸೋಂಕು ತಗುಲಿದೆ.

ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ಕೊರೊನಾ ಕುರಿತ ಎಲ್ಲಾ ಮಾರ್ಗಸೂಚಿಗಳನ್ನು ನಾನು ಪಾಲಿಸುತ್ತೇನೆ. ಅಗತ್ಯ ವೈದ್ಯಕೀಯ ನೆರವನ್ನು ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇನ್ನು ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇತ್ತೀಚೆಗೆ ಬಾಲಿವುಡ್ ನಟಿ ಆಲಿಯಾ ಭಟ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದರ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ನಟ ಅಕ್ಷಯ್ ಕುಮಾರ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ.

- Advertisement -
- Advertisment -

Latest News

error: Content is protected !!