Thursday, June 4, 2026
Homeಕರಾವಳಿಮಂಗಳೂರುಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ ಪುತ್ತೂರಿನಲ್ಲಿ ಮದ್ಯ ನಿಷೇಧ

ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ ಪುತ್ತೂರಿನಲ್ಲಿ ಮದ್ಯ ನಿಷೇಧ

- Advertisement -
- Advertisement -

ಪುತ್ತೂರು ; ಇಂದು ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 18 ಅಂದರೆ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ ಪುತ್ತೂರಿನಲ್ಲಿ ಮದ್ಯ ನಿಷೇಧಿಸಿ ಜಿಲ್ಲಾಧಿಕಾರಿ  ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಪುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಮದ್ಯ ನಿಷೇಧಿಸಿ ಡಿಸಿ ಆದೇಶ ನೀಡಿದ್ದಾರೆ.

ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಏಪ್ರಿಲ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಏಪ್ರಿಲ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಏಪ್ರಿಲ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಏಪ್ರಿಲ್ 18ರ ಬೆಳಿಗ್ಗೆ ಆರು ಗಂಟೆವರೆಗೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!