Wednesday, June 3, 2026
HomeUncategorizedಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್ ಕೊಡಲು ಮುಂದಾದ ರಾಜ್ಯ ಸರ್ಕಾರ; ಜುಲೈ 1ರಿಂದ  ಮದ್ಯದ ದರ...

ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್ ಕೊಡಲು ಮುಂದಾದ ರಾಜ್ಯ ಸರ್ಕಾರ; ಜುಲೈ 1ರಿಂದ  ಮದ್ಯದ ದರ ಇಳಿಕೆ

- Advertisement -
- Advertisement -

ಬೆಂಗಳೂರು: ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಅದರಂತೆ ಜುಲೈ 1ರಿಂದ  ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಇಳಿಕೆಯಾಗಲಿದೆ.

ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ಅಗ್ಗವಾಗಲಿದೆ ಎನ್ನಲಾಗಿದೆ.

ಅಬಕಾರಿ ತೆರಿಗೆ ಇಳಿಕೆ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ ನೀಡಿದೆ. ಹೆಚ್ಚುವರಿ ಅಬಕಾರಿ ತೆರಿಗೆಯಿಂದ ರಾಜ್ಯದ ಬೊಕ್ಕಸದ ಆದಾಯಕ್ಕೆ ಹೊಡೆತ ಬೀಳುತ್ತಿದ್ದು, ಹೀಗಾಗಿ, ಸ್ಪರ್ಧಾತ್ಮಕ ದರ ನಿಗದಿಪಡಿಸಲು ಸರಕಾರ ಅಧಿಸೂಚನೆ ಹೊರಡಿಸಿದೆ.

- Advertisement -

Latest News

error: Content is protected !!