Friday, June 5, 2026
Homeತಾಜಾ ಸುದ್ದಿಬಾಲಿವುಡ್ ಬೆಡಗಿ ಆಲಿಯಾ ಭಟ್ ಗೆ ಕೊರೊನಾ ಸೋಂಕು ದೃಢ: ಹೋಂ ಕ್ವಾರಂಟೈನ್

ಬಾಲಿವುಡ್ ಬೆಡಗಿ ಆಲಿಯಾ ಭಟ್ ಗೆ ಕೊರೊನಾ ಸೋಂಕು ದೃಢ: ಹೋಂ ಕ್ವಾರಂಟೈನ್

- Advertisement -
- Advertisement -

ಮುಂಬೈ: ದೇಶಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಇನ್ ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿರುವ ಆಲಿಯಾಭಟ್, ಎಲ್ಲರಿಗೂ ನಮಸ್ಕಾರ, ನನಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕೂಡಲೇ ನಾನು ಪ್ರತ್ಯೇಕ ವಾಸಕ್ಕೆ ಒಳಗಾಗಿದ್ದು, ಹೋಮ್ ಕ್ವಾರಂಟೈನ್ ನಲ್ಲಿದ್ದೇನೆ. ನನ್ನ ವೈದ್ಯರ ಸಲಹೆಯಂತೆ ಎಲ್ಲ ಸುರಕ್ಷಾ ಕ್ರಮಗಳನ್ನು ಅನುಸರಿಸುತ್ತಿದ್ದೇನೆ. ನಿಮ್ಮಲ್ಲರ ಪ್ರೀತಿ ಹಾಗೂ ಬೆಂಬಲಕ್ಕೆ ಕೃತಜ್ಞಳಾಗಿದ್ದೇನೆ. ದಯವಿಟ್ಟು ಸುರಕ್ಷಿತವಾಗಿರಿ ಕಾಳಜಿ ವಹಿಸಿ ಎಂದು ಬರೆದುಕೊಂಡಿದ್ದಾರೆ.

- Advertisement -

Latest News

error: Content is protected !!