Friday, June 27, 2025
Homeಕರಾವಳಿಉಡುಪಿಉಡುಪಿ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಛಾಟನೆ; ಎಕ್ಸ್ ನಲ್ಲಿ ಭಟ್ರನ್ನು ಕುಟುಕಿದ ಹಿಜಾಬ್...

ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಛಾಟನೆ; ಎಕ್ಸ್ ನಲ್ಲಿ ಭಟ್ರನ್ನು ಕುಟುಕಿದ ಹಿಜಾಬ್ ವಿವಾದದ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ

spot_img
- Advertisement -
- Advertisement -

ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಜಾಬ್ ವಿವಾದದ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ ಭಟ್ರನ್ನು ಕುಟುಕಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆಕೆ, , ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ? ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು ಎಂದು ಹೇಳಿದ್ದಾರೆ.

ರಘುಪತಿ ಭಟ್ ಅವರೇ, ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ ಎಂದು ತಿರುಗೇಟು ನೀಡಿದ್ದಾರೆ.

- Advertisement -
spot_img

Latest News

error: Content is protected !!