ನವದೆಹಲಿ: ನಾಳೆ ಬ್ಯಾಂಕ್ ನೌಕರರ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾಗೂ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ಕೊಟ್ಟಿದೆ.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಗಳು ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿದ್ದು, ಮುಷ್ಕರವನ್ನು ತಪ್ಪಿಸಲು ಬ್ಯಾಂಕ್ ನೌಕರರ ಸಂಘಟನೆಗಳೊಂದಿಗೆ ನಡೆಸಿದ ಮಾತುಕತೆ ವಿಫಲವಾಗಿದ್ದು, ಅನಿವಾರ್ಯವಾಗಿ ಮುಷ್ಕರಕ್ಕೆ ಕರೆ ಕೊಟ್ಟಿವೆ. ಈ ಮುಷ್ಕರವು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯಲಿದ್ದು, ಇದರಿಂದಾಗಿ ದೇಶದಾದ್ಯಂತ ಬ್ಯಾಂಕ್ ಸೇವೆಗಳು ವ್ಯತ್ಯಯವಾಗುವ ಸಾಧ್ಯತೆ ಇದೆ
ಇನ್ನು ಭಾರತ್ ಬಂದ್ ಮುಷ್ಕರದಲ್ಲಿ ದೇಶದಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗವಹಿಸಲಿದ್ದಾರೆ. ಪ್ರತಿಭಟನೆಯಿಂದ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ.