- Advertisement -
- Advertisement -
ಉಳ್ಳಾಲ: ಮಳೆ ಕಡಿಮೆಯಾದರೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಇನ್ನೂ ನೆರೆ ನೀರು ಸಂಪೂರ್ಣ ಇಳಿಯದೇ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ.
ನಿನ್ನೆ ಇಡೀ ದಿನ ಸುರಿದ ಮಳೆಗೆ ನೇತ್ರಾವತಿ ನದಿ ಉಕ್ಕಿ ಹರಿದಿದ್ದು, ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೇ ಕೃ಼ಷಿ ಭೂಮಿಗಳಿಗೂ ನದಿ ನೀರು ಹರಿದಿದೆ.
ನೇತ್ರಾವತಿ ನದಿಗೆ ನೀರಿನ ಒಳ ಹರಿವು ಹೆಚ್ಚಳವಾಗಿದ್ದು, ಉಳ್ಳಾಲ ತಾಲೂಕಿನ ಹರೇಕಳದಲ್ಲಿರುವ ಅಣೆಕಟ್ಟಿನಿಂದ ನೀರು ಹೊರಬಿಡಲಾಗಿದೆ
ಒಳ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಣೆಕಟ್ಟಿನ ಎಲ್ಲಾ ಗೇಟ್ ಗಳನ್ನು ತೆರೆಯಲಾಗಿದೆ. ನೀರಿನ ಪ್ರಮಾಣ ಹೆಚ್ಚು ಇರುವ ಹಿನ್ನೆಲೆಯಲ್ಲಿ ನದಿ ತೀರದಲ್ಲಿರುವ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಇದೇ ವೇಳೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನಲೆಯಲ್ಲಿ ಸಮುದ್ರ ತೀರಕ್ಕೂ ತೆರಳದಂತೆಯೂ ಜಿಲ್ಲಾಡಳಿತ ಎಚ್ಚರಿಸಿದೆ.
- Advertisement -