Sunday, June 7, 2026
Homeತಾಜಾ ಸುದ್ದಿವಿಧಾನ ಪರಿಷತ್ ಚುನಾವಣೆ: ಎಲ್ಲಾ ನಾಮಪತ್ರಗಳು ಕ್ರಮಬದ್ಧ

ವಿಧಾನ ಪರಿಷತ್ ಚುನಾವಣೆ: ಎಲ್ಲಾ ನಾಮಪತ್ರಗಳು ಕ್ರಮಬದ್ಧ

- Advertisement -
- Advertisement -

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಏಳು ಸ್ಥಾನಗಳ ಚುನಾವಣೆಗೆ ಸಲ್ಲಿಸಲ್ಪಟ್ಟಿರುವ ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿದೆ.

ವಿಧಾನಸೌಧದಲ್ಲಿ ಇಂದು ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ನಾಮಪತ್ರಗಳು ಕ್ರಮಬದ್ಧವಾಗಿವೆ ಮತ್ತು ಅಂಗೀಕೃತವಾಗಿವೆ ಎಂದು ತಿಳಿಸಿದ್ದಾರೆ.

ನಾಲ್ವರು ಬಿಜೆಪಿ ಅಭ್ಯರ್ಥಿಗಳಾದ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ ನಾಯಕ್, ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳಾದ ನಾಗರಾಜು ಯಾದವ್, ಅಬ್ದುಲ್ ಜಬ್ಬಾರ್ ಮತ್ತು ಓರ್ವ ಜೆಡಿಎಸ್ ಅಭ್ಯರ್ಥಿ ಟಿ.ಎ. ಶರವಣ ಸಲ್ಲಿಸಿದ್ದ ನಾಮಪತ್ರಗಳು ಕ್ರಮಬದ್ಧವಾಗಿವೆ.‌

ಜೂನ್ 3 ರಂದು ಚುನಾವಣೆ ನಿಗದಿಯಾಗಿದ್ದು, ಏಳು ಸ್ಥಾನಗಳಿಗೆ ಏಳು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿರುವ ಕಾರಣ ಅವಿರೋಧ ಆಯ್ಕೆ ನಡೆಯಲಿದೆ.

- Advertisement -

Latest News

error: Content is protected !!