Sunday, April 28, 2024
Homeತಾಜಾ ಸುದ್ದಿಕಾವೇರಿ-ಮಹದಾಯಿ-ಮೇಕೆದಾಟು ವಿಚಾರಕ್ಕಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ:ಸರ್ವ ಪಕ್ಷ ಸಭೆಯಲ್ಲಿ ಸಿಎಂ...

ಕಾವೇರಿ-ಮಹದಾಯಿ-ಮೇಕೆದಾಟು ವಿಚಾರಕ್ಕಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ:ಸರ್ವ ಪಕ್ಷ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು: ಕಾವೇರಿ, ಮಹದಾಯಿ ಮತ್ತು ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರುಗಳ ಮತ್ತು ಸಂಸದರ ಅಭಿಪ್ರಾಯಗಳನ್ನು ಕೇಳಿಸಿಕೊಂಡ ಬಳಿಕ ಸಿಎಂ ಈ ಹೇಳಿಕೆ ನೀಡಿದ್ದಾರೆ.

ಕನ್ನಡ ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ಹಿತ ಕಾಪಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ. 7 ಕೋಟಿ ಕನ್ನಡಿಗರ ಹಿತ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸರ್ವ ಪಕ್ಷಗಳೂ ಒಟ್ಟಾಗಿ ಶ್ರಮಿಸೋಣ. ಹೀಗಾಗಿ ಸರ್ವ ಪಕ್ಷ ನಿಯೋಗಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಸಭೆಯಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಮ್ಮ ರೈತರ ಹಿತವನ್ನು ಸಂಪೂರ್ಣ ಕಾಪಾಡಿದ್ದೇವೆ. ನಮ್ಮ ಬೆಳೆ ರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದೂ ಸಿದ್ದರಾಮಯ್ಯ ಸರ್ವಪಕ್ಷ ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದ ಗೌಡ, ಎಂ. ವೀರಪ್ಪ ಮೊಯಿಲಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!