Wednesday, June 3, 2026
Homeತಾಜಾ ಸುದ್ದಿನೀರಾವರಿ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆ

ನೀರಾವರಿ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆ

- Advertisement -
- Advertisement -

ಬೆಂಗಳೂರು: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಮತ್ತು ಸಂಸದರು ಭಾಗವಹಿಸಿದ್ದರು.

ಸಭೆಯಲ್ಲಿ ಜಲ ಸಂಪನ್ಮೂಲ‌ ಸಚಿವ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ್, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಪಾಲ್ಗೊಂಡಿದ್ದರು.

ಹಿರಿಯ ವಕೀಲರಾದ ಮೋಹನ್‌ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಮತ್ತು ಎಸ್.ಎಂ. ಕೃಷ್ಣ ಸಭೆಗೆ ಗೈರಾಗಿದ್ದರೆ, ರಾಜ್ಯವನ್ನು ಪ್ರತಿನಿಧಿಸುವ ಆರು ಕೇಂದ್ರ ಸಚಿವರು ಕೂಡಾ ಸಭೆಯಿಂದ ದೂರ ಉಳಿದಿದ್ದರು.

- Advertisement -

Latest News

error: Content is protected !!