Wednesday, June 3, 2026
Homeತಾಜಾ ಸುದ್ದಿರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

- Advertisement -
- Advertisement -

ಹುಬ್ಬಳ್ಳಿ: ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಘರ್ಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ‌, ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳಿಗೆ ಪೊಲೀಸ್ ತುಕಡಿಗಳ ನಿಯೋಜನೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ, ಈಗಾಗಲೇ ಕೆಎಸ್ಆರ್ ಪಿ ತುಕಡಿಗಳ ಚಲನೆ ಪ್ರಾರಂಭವಾಗಿದೆ. ಹುಬ್ಬಳ್ಳಿ ಪೊಲೀಸ್ ಆಯುಕ್ತರು ಮತ್ತು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದೆ ಎಂದು ಸಿಎಂ ಹೇಳಿದ್ದಾರೆ.

ಇದಲ್ಲದೇ, ಎಲ್ಲಾ ಸಮುದಾಯಗಳ ನಾಯಕರೊಂದಿಗೆ ಮಾತುಕತೆ ನಡೆಸಿ, ಸೌಹಾರ್ದತೆಯನ್ನು ಕಾಪಾಡುವಂತೆ ಪೊಲೀಸ್ ಇನ್ಸಪೆಕ್ಟರ್ ಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -

Latest News

error: Content is protected !!