Sunday, May 5, 2024
HomeUncategorizedಮಂಗಳೂರಿನ ಖಾಸಗಿ ಶಾಲೆಯಲ್ಲಿ ಪಾಠದ ವೇಳೆ ಧರ್ಮ ನಿಂದನೆ ಆರೋಪ; ಶಿಕ್ಷಕಿಯ ಅಮಾನತು

ಮಂಗಳೂರಿನ ಖಾಸಗಿ ಶಾಲೆಯಲ್ಲಿ ಪಾಠದ ವೇಳೆ ಧರ್ಮ ನಿಂದನೆ ಆರೋಪ; ಶಿಕ್ಷಕಿಯ ಅಮಾನತು

spot_img
- Advertisement -
- Advertisement -

ಮಂಗಳೂರು: ಇಲ್ಲಿನ ಖಾಸಗಿ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಪಾಠ ಮಾಡುತ್ತಿರುವ ಸಂದರ್ಭದಲ್ಲಿ ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪದಡಿಯಲ್ಲಿ ಶಾಲೆಯ ಆಡಳಿತ ಮಂಡಳಿ ಅಮಾನತು ಮಾಡಿದೆ.

ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಪೋಷಕರು ದೇವರಿಗೆ ಮಾಡಿದ ಅವಹೇಳನವನ್ನು ಖಂಡಿಸಿ ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ. ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದ್ದು, ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದಾರೆ. ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್‌ ಕಾಮತ್‌ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದಿದ್ದಾರೆ.

ಇನ್ನು ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ಸಂಬಂಧ, ಲಿಖಿತ ರೂಪದಲ್ಲಿ ಅಮಾನತು ಆದೇಶ ಹೊರಡಿಸಲಾಗಿದೆಯಾದರೂ ಆಡಳಿತ ಮಂಡಳಿ ತಪ್ಪು ಒಪ್ಪಿಕೊಂಡಿಲ್ಲ. ಮುಖ್ಯ ಶಿಕ್ಷಕಿಯ ಅಮಾನತು ಆದೇಶ ಓದುವ ವೇಳೆ ಹಿಂದೂ ಕಾರ್ಯಕರ್ತರು ಹಾಗೂ ಪೋಷಕರು ಮತ್ತೆ ರೊಚ್ಚಿಗೆದ್ದಿದ್ದಾರೆ. ಮುಖ್ಯಶಿಕ್ಷಕಿ ಮತ್ತು ಶಾಲಾ ಆಡಳಿತಕ್ಕೆ ಶಾಸಕರು ಹಿಗ್ಗಾಮುಗ್ಗಾವಾಗಿ ತರಾಟೆಗೆ ತೆಗೆದುಕೊಂಡರು. ನೀವು ನಿಮ್ಮ ತಪ್ಪು ಒಪ್ಪಿಕೊಳ್ಳದೇ ಇದ್ದರೆ ನಾವು ಬಿಡಲ್ಲ. ನಿಮ್ಮದಾರಿಗೆ ನಿಮಗೆ, ನಮ್ಮದಾರಿ ನಮಗೆ ಅಂತ ಕಾಮತ್ ಎಚ್ಚರಿಕೆ ನೀಡಿದರು ಎಂದು ತಿಳಿದು ಬಂದಿದೆ.

ಘಟನೆಯ ವಿವರ: ಖಾಸಗಿ ಶಾಲೆಯ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಮಕ್ಕಳಲ್ಲಿ ಶಿಕ್ಷಕಿ ಶಾಲಾ ಮಕ್ಕಳಿಗೆ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿ ಬೋಧನೆ ಮಾಡಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ಧರ್ಮ ವಿರೋಧಿ ಭಾವನೆಯನ್ನು ಮೂಡಿಸಲು ಯತ್ನ ಮಾಡಲಾಗಿದೆ. ಅಲ್ಲದೆ ಅವಹೇಳನದ ವಿರುದ್ಧ ಧ್ವನಿ ಎತ್ತಿ ಪ್ರತಿಭಟಿಸಲು ನಿರ್ಧರಿಸಿದ್ದು, ಎಲ್ಲಾ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲಾ ಆವರಣದಲ್ಲಿ ಸೇರುವಂತೆ ಸಂದೇಶ ರವಾನಿಸಿದ ಆಡಿಯೋ ವೈರಲ್ ಆಗಿತ್ತು. ಅದರಂತೆ, ವಿದ್ಯಾರ್ಥಿಗಳ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲಾ ಆವರಣದಲ್ಲಿ ಜಮಾಯಿಸಿ ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ, ಆಡಳಿತ ಮಂಡಳಿ ಜೊತೆ ಮಾತನಾಡಿ ತೆರಳುವ ವೇಳೆ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಐವನ್ ಡಿಸೋಜಾ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು ಎಂದು ತಿಳಿದು ಬಂದಿದೆ.

ಇನ್ನು ವಿದ್ಯಾರ್ಥಿ ಪೋಷಕರಾದ ಶರತ್ ಕುಮಾರ್ ಎಂಬವವರು ಶಿಕ್ಷಕಿ ಸಿಸ್ಟ‌ರ್‍ ಪ್ರಭಾ ವಿರುದ್ಧ, ‘ವಿದ್ಯಾರ್ಥಿಗಳಿಗೆ ಹಿಂದೂ ದೇವರ ಮೇಲಿನ ನಂಬಿಕೆ ಹೋಗುವಂತೆ ಕ್ರೈಸ್ತ ಮತವನ್ನು ವೈಭವೀಕರಿಸಿ ಮತಾಂತರಕ್ಕೆ ಪ್ರೇರೇಪಿಸುತ್ತಿದ್ದಾರೆ,’ ಎಂದು ಆರೋಪಿಸಿ ಪಾಂಡೇಶ್ವರ ಪೊಲೀಸ್ ಠಾಣೆಗೆ ನಿನ್ನೆ ದೂರು ನೀಡಿದ್ದರು.

- Advertisement -
spot_img

Latest News

error: Content is protected !!