- Advertisement -
- Advertisement -
ಉಡುಪಿ: ಪೊಲೀಸ್ ಇಲಾಖೆಯ ಕಚೇರಿಯಲ್ಲಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಲಂಚದ ಹಣಕ್ಕೆ ಬೇಡಿಕೆಯಿಟ್ಟು ಹಣ ಪಡೆದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಖಾಸಗಿ ವಾಹಿನಿಯಲ್ಲಿ ವೈರಲ್ ಆದ ಬೆನ್ನಲ್ಲೇ ಉಡುಪಿ ಜಿಲ್ಲೆಯ ಕಾರ್ಕಳ ಉಪವಿಭಾಗದ ಡಿವೈಎಸ್‌ಪಿ ವಿಜಯ ಪ್ರಸಾದ್, ಕಾರ್ಕಳ ಸರ್ಕಲ್ ಇನ್ಸ್‌ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಶಿವಾನಂದ ಅವರನ್ನು ಅಮಾನತುಗೊಳಿಸಲಾಗಿದೆ.
ಉಡುಪಿ ಜಿಲ್ಲೆಯ ಹೆಚ್ಚುವರಿ ಎಸ್‌ಪಿ ಅವರು ನಡೆಸಿದ ಪ್ರಾಥಮಿಕ ತನಿಖಾ ವರದಿಯನ್ನಾಧರಿಸಿ ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಮೂವರನ್ನೂ ಜು.30 ರಂದು ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ತಿಳಿಸಿದ್ದಾರೆ.
- Advertisement -


