Tuesday, October 6, 2026
Homeಕರಾವಳಿಉಡುಪಿಉಡುಪಿ ಶ್ರೀಕೃಷ್ಣ ಮಠದಲ್ಲಿ ಧರ್ಮದ ಆಧಾರದಲ್ಲಿ ವಸತಿ ನಿರಾಕರಣೆ ಆರೋಪ; ಡಿವೈಎಫ್ಐ ಖಂಡನೆ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಧರ್ಮದ ಆಧಾರದಲ್ಲಿ ವಸತಿ ನಿರಾಕರಣೆ ಆರೋಪ; ಡಿವೈಎಫ್ಐ ಖಂಡನೆ

- Advertisement -
- Advertisement -

ಉಡುಪಿ ಶ್ರೀಕೃಷ್ಣ ಮಠದ ವಸತಿಗೃಹದಲ್ಲಿ ಹಿಂದೂ ಕುಟುಂಬದೊಂದಿಗೆ ಬಂದಿದ್ದ ಮುಸ್ಲಿಂ ಯುವತಿಗೆ ಧರ್ಮದ ಕಾರಣ ನೀಡಿ ವಸತಿ ನಿರಾಕರಿಸಲಾಗಿದೆ ಎಂಬ ಆರೋಪವನ್ನು ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಹಾಗೂ ಧರ್ಮದ ಆಧಾರದ ಮೇಲೆ ತಾರತಮ್ಯವಿಲ್ಲದೆ ಬದುಕುವ ಹಕ್ಕನ್ನು ಖಾತರಿಪಡಿಸಿದೆ. ಧರ್ಮವು ವ್ಯಕ್ತಿಯ ವೈಯಕ್ತಿಕ ನಂಬಿಕೆಯ ವಿಷಯವಾಗಿದ್ದು, ಸಾರ್ವಜನಿಕರಿಗೆ ವಸತಿ ಸೇರಿದಂತೆ ಸೌಲಭ್ಯಗಳನ್ನು ಒದಗಿಸುವಾಗ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ಸಮಿತಿ ಹೇಳಿದೆ.

ಘಟನೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು. ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!