- Advertisement -
- Advertisement -
ಉಡುಪಿ: ಕಾಪು ಹಾಗೂ ಮಟ್ಟು ಬೀಚ್ಗಳಿಗೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 5.710 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಬೆಳಪು ಗ್ರಾಮದ ವಿನಯನಗರ ನಿವಾಸಿ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆ, ಕೆಮ್ಮಣ್ಣು ನಿವಾಸಿ ಅಕೀಫ್ (34) ಎಂದು ಗುರುತಿಸಲಾಗಿದೆ.
ಅ.27ರಂದು ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಉಳಿಯಾರಗೋಳಿ ಗ್ರಾಮದ ಯಾರ್ಡ್ ಬೀಚ್ನಲ್ಲಿ ದಾಳಿ ನಡೆಸಿದರು. ಈ ವೇಳೆ ಆರೋಪಿಗಳು ತಮ್ಮ ಸ್ವಂತ ಲಾಭಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಹೊಂದಿರುವುದು ಪತ್ತೆಯಾಗಿದೆ. ಬಳಿಕ ಪೊಲೀಸರು ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
- Advertisement -


