Saturday, June 29, 2024
Homeತಾಜಾ ಸುದ್ದಿವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಎಸ್.ಎಲ್. ಭೋಜೇಗೌಡ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಎಸ್.ಎಲ್. ಭೋಜೇಗೌಡ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ಮೈಸೂರು: ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ – ಬಿಜೆಪಿ
ಮೈತ್ರಿ ಅಭ್ಯರ್ಥಿಯಾಗಿ ಎಸ್.ಎಲ್. ಭೋಜೇಗೌಡ ನಾಮಪತ್ರ ಸಲ್ಲಿಸಿದ್ದಾರೆ.ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಭೋಜೇಗೌಡ ಮೂರು ಸೆಟ್ ಗಳ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಡಿ.ಎನ್. ಜೀವರಾಜ್, ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ, ಬೆಳ್ಳಿ ಪ್ರಕಾಶ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಉಪಸ್ಥಿತರಿದ್ದರು.

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3 ರಂದು ಚುನಾವಣೆ ನಡೆಯಲಿದ್ದು, ಜೂನ್ 6 ರಂದು ಫಲಿತಾಂಶ ಪ್ರಕಟವಾಗಲಿದೆ.

ನೈಋತ್ಯ ಶಿಕ್ಷಕರ ಕ್ಷೇತ್ರವು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳು ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗೂ ಚನ್ನಗಿರಿ ತಾಲೂಕುಗಳ ವ್ಯಾಪ್ತಿಯನ್ನು ಒಳಗೊಂಡಿದೆ

- Advertisement -
spot_img

Latest News

error: Content is protected !!