Friday, November 20, 2026
Homeಕರಾವಳಿಮಂಗಳೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಅಲೆಸ್ಟೈನ್ ಕ್ಲೈವ್ ಡಿಕುನ್ಹಾ ಪದಗ್ರಹಣ

ಮಂಗಳೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಅಲೆಸ್ಟೈನ್ ಕ್ಲೈವ್ ಡಿಕುನ್ಹಾ ಪದಗ್ರಹಣ

- Advertisement -
- Advertisement -

ಮಂಗಳೂರು: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಂಗಳೂರು ತಾಲೂಕು ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಲೆಸ್ಟೈನ್ ಕ್ಲೈವ್ ಡಿಕುನ್ಹಾ ಅವರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದರು.

ಮಂಗಳೂರು ತಾಲೂಕು ಪಂಚಾಯತ್‌ನಲ್ಲಿರುವ ಗ್ಯಾರಂಟಿ ಸಮಿತಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ನೂತನ ಅಧ್ಯಕ್ಷರಿಗೆ ಶಾಲು ಹೊದಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿಸೋಜಾ ಅವರು, ನಿಕಟಪೂರ್ವ ಅಧ್ಯಕ್ಷ ಸುರೇಂದ್ರ ಬಿ. ಕಂಬಳಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ತಾಲೂಕು ಮಟ್ಟದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಸಮಾವೇಶ ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಅವರು ಅಧ್ಯಕ್ಷ ಸ್ಥಾನಕ್ಕೆ ನ್ಯಾಯ ಒದಗಿಸಿದ್ದಾರೆ. ಅದೇ ರೀತಿ ನೂತನ ಅಧ್ಯಕ್ಷ ಅಲೆಸ್ಟೈನ್ ಕ್ಲೈವ್ ಡಿಕುನ್ಹಾ ಅವರೂ ಮುಂದಿನ ದಿನಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಸುರೇಂದ್ರ ಬಿ. ಕಂಬಳಿ, ಸ್ಟ್ಯಾನಿ ಅಲ್ವಟ್ಸ್, ಶ್ಯಾಲೆಟ್ ಪಿಂಟೂ, ಪದ್ಮರಾಜ್ ಆರ್. ಪೂಜಾರಿ, ನಾಗೇಂದ್ರ ಕುಮಾರ್ ಜಪ್ಪಿನಮೊಗರು, ಕುಮಾರಿ ಅಪ್ಪಿ, ಮೀನಾ ಟೆಲ್ಲೀಸ್, ಲಿವಿಟ ನೊರೆನ್ಹಾ, ಅನಿತಾ ಡಿಸೋಜಾ, ಕವಿತಾ ವಾಸು, ಶಶಿಕಲಾ ಪದ್ಮನಾಭ, ಯು.ಪಿ. ಇಬ್ರಾಹಿಂ, ಜಾನ್ ಮೊಂತೆರೋ, ಎಂಸಿಸಿ ಬ್ಯಾಂಕ್ ಮುಖ್ಯಸ್ಥ ಅನಿಲ್ ಲೋಬೋ, ಮಾಜಿ ಮೇಯರ್ ಶಶಿಧರ್ ಹೆಗಡೆ ಸೇರಿದಂತೆ ಹಲವು ಗಣ್ಯರು ಹಾಗೂ ಗ್ಯಾರಂಟಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!