Thursday, June 4, 2026
HomeUncategorizedಈ ಬಾರಿಯ ಆಳ್ವಾಸ್ ನುಡಿಸಿರಿ ತಾತ್ಕಾಲಿಕ ಮುಂದೂಡಿಕೆ

ಈ ಬಾರಿಯ ಆಳ್ವಾಸ್ ನುಡಿಸಿರಿ ತಾತ್ಕಾಲಿಕ ಮುಂದೂಡಿಕೆ

- Advertisement -
- Advertisement -

ಮೂಡಬಿದಿರೆ: ಇಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಡಿ.21ರಿಂದ 23ರವರೆಗೆ ನಡೆಸಲು ಉದ್ದೇಶಿಸಿದ್ದ ‘ಆಳ್ವಾಸ್ ನುಡಿಸಿರಿ-2022’ ಅನ್ನು ಅನಿವಾರ್ಯ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಡಿ.21ರಿಂದ 27ರ ವರೆಗೆ ನಡೆಸಲು ಉದ್ದೇಶಿಸಿರುವ ‘ಸ್ಕೌಟ್ಸ್ ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ’ಯು 50 ಸಾವಿರ ಪ್ರತಿನಿಧಿಗಳು ಮತ್ತು 10 ಸಾವಿರ ಅಧಿಕಾರಿಗಳೊಂದಿಗೆ ನಮ್ಮ ನಿರೀಕ್ಷೆಯನ್ನೂ ಮೀರಿ ವಿಸ್ತಾರಗೊಳ್ಳುತ್ತಿದ್ದು, ಈ ಎರಡು ಕಾರ್ಯಕ್ರಮಗಳನ್ನು ಏಕಕಾಲದಲ್ಲಿ ನಿರ್ವಹಿಸಲು ಮತ್ತು ವ್ಯವಸ್ಥೆಗೊಳಿಸಲು ಕಷ್ಟವಾಗುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!