Saturday, May 18, 2024
Homeಕರಾವಳಿಮೂಡಬಿದಿರೆಯಲ್ಲಿ ಆಳ್ವಾಸ್ ವಿರಾಸತ್ -2023;ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ರಾಜ್ಯಪಾಲರಿಂದ ಚಾಲನೆ

ಮೂಡಬಿದಿರೆಯಲ್ಲಿ ಆಳ್ವಾಸ್ ವಿರಾಸತ್ -2023;ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ರಾಜ್ಯಪಾಲರಿಂದ ಚಾಲನೆ

spot_img
- Advertisement -
- Advertisement -

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಮೂಡಬಿದಿರೆಯಲ್ಲಿ ಆಯೋಜಿಸಿರುವ ಆಳ್ವಾಸ್ ವಿರಾಸತ್- 2023, ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಆಳ್ವಾಸ್ ಬೋಧನಾ ಸಂಸ್ಥೆಯು ಭಾರತದ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಅಧ್ಯಯನ ಮಾಡಲು ಬರುವ ವಿಶಿಷ್ಟ ಬೋಧನಾ ಸಂಸ್ಥೆಯಾಗಿದೆ. ಸಂಸ್ಥೆಯಲ್ಲಿ ಸುಮಾರು 21,000 ವಿದ್ಯಾರ್ಥಿಗಳು ಎಲ್‌ಕೆಜಿಯಿಂದ ಪಿಎಚ್‌ಡಿವರೆಗೆ ಓದುತ್ತಿದ್ದಾರೆ ಎಂದು ನನಗೆ ತಿಳಿದು ಬಂದಿದೆ ಎಂದರು.

ಅಲ್ಲದೇ ಆಳ್ವಾಸ್ ಟೀಚಿಂಗ್ ಫೌಂಡೇಶನ್ ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಗೆ ಕ್ರೀಡೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರಕಾರಗಳ ಜ್ಞಾನವನ್ನು ನೀಡುವ ಮೂಲಕ ವೈಶಿಷ್ಟ್ಯಗೊಳಿಸಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು‌ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗಡೆ, ಆಳ್ವಾಸ್ ಫೌಂಢೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಶಾಸಕ‌ ಉಮಾನಾಥ್ ಕೋಟ್ಯಾನ್ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!