Saturday, October 17, 2026
Homeಕರಾವಳಿರಾಜ್ಯಸಭಾ ಚುನಾವಣೆಯಲ್ಲಿ ನಾನೂ ಕೂಡಾ ಆಕಾಂಕ್ಷಿ; ಮೈಸೂರಿನಲ್ಲಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿಕೆ

ರಾಜ್ಯಸಭಾ ಚುನಾವಣೆಯಲ್ಲಿ ನಾನೂ ಕೂಡಾ ಆಕಾಂಕ್ಷಿ; ಮೈಸೂರಿನಲ್ಲಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿಕೆ

- Advertisement -
- Advertisement -

ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ನಾನೂ ಕೂಡಾ ಆಕಾಂಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ಸದಾನಂದ ಗೌಡ, ತಮ್ಮ ಅಪೇಕ್ಷೆಯನ್ನು ವರಿಷ್ಠರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.ಜೂನ್ 26 ರಂದು ಕರ್ನಾಟಕದ ನಾಲ್ಕು ರಾಜ್ಯಸಭಾ ಸದಸ್ಯರು ನಿವೃತ್ತಿಯಾಗಲಿದ್ದು, ತೆರವಾಗಲಿರುವ ಸ್ಥಾನಕ್ಕೆ ಜೂನ್ 18 ರಂದು ಚುನಾವಣೆ ‌ನಿಗದಿಯಾಗಿದೆ. ಬಿಜೆಪಿಗೆ ದೊರೆಯಲಿರುವ ಒಂದು ಸ್ಥಾನಕ್ಕೆ ಎನ್ ಡಿಎ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಆಯ್ಕೆ ಮಾಡುವ ಸಾಧ್ಯತೆಯೇ ಹೆಚ್ಚಾಗಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿಯೇ ಸ್ಫರ್ಧಿಸುವುದಾದರೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಹೆಸರನ್ನು ಹೈಕಮಾಂಡ್ ಗೆ ಶಿಫಾರಸು ಮಾಡಲು ಕೆಲವು ದಿನಗಳ ಹಿಂದೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು.

- Advertisement -

Latest News

error: Content is protected !!