- Advertisement -
- Advertisement -
ಬಂಟ್ವಾಳ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 129ನೇ ಜನ್ಮ ದಿನಾಚರಣೆಯನ್ನು ಇಂದು ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜೆ. ಎಸ್. ವೈ. ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ ಎಸ್. ಆರ್. ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಯಶ್ರೀ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ, ಬಂಟ್ವಾಳ ತಾ.ಪಂ, ತಾಲೂಕು ಕಚೇರಿ ಬಂಟ್ವಾಳದ ಸಿಬ್ಬಂದಿ ವರ್ಗದವರು ಹಾಜರಿದ್ದರು.
- Advertisement -