- Advertisement -
- Advertisement -
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರು ನಗರದ ಜ್ಯೋತಿ ಸರ್ಕಲ್ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಾಣಗೊಳ್ಳಲಿದೆ.
ಜ್ಯೋತಿ ವೃತ್ತದಲ್ಲಿ ಕೆಎಂಸಿ ಆಸ್ಪತ್ರೆ ಬಳಿ ಅಂಬೇಡ್ಕರ್ ರವರ ಭವ್ಯ ಪ್ರತಿಮೆ ಸಹಿತ ಆಕರ್ಷಕ ವೃತ್ತ ನಿರ್ಮಾಣವಾಗಲಿದೆ.
ವಿಶೇಷ ಆದ್ಯತೆಯ ಮೇರೆಗೆ ಶೀಘ್ರವಾಗಿ ಈ ಯೋಜನೆಯು ಪೂರ್ಣಗೊಳ್ಳಲಿದ್ದು, ಭೂಮಿ ಪೂಜೆಯು ಭಾನುವಾರ ನೆರವೇರಿತು.
ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೂಮಿ ಪೂಜೆ ನೇರವೇರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಶ್ರೀಮತಿ ಸುನಿತಾ, ಪಾಲಿಕೆ ಸದಸ್ಯರುಗಳು ಹಾಗೂ ದಲಿತ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದರು.
- Advertisement -