Wednesday, June 3, 2026
Homeಕರಾವಳಿಉಡುಪಿಉಡುಪಿ; ವೇಗವಾಗಿ  ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಕಂಬಕ್ಕೆ  ಡಿಕ್ಕಿ; ಘಟನೆಯಲ್ಲಿ  ಮೂವರಿಗೆ ಗಂಭೀರ ಗಾಯ

ಉಡುಪಿ; ವೇಗವಾಗಿ  ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಕಂಬಕ್ಕೆ  ಡಿಕ್ಕಿ; ಘಟನೆಯಲ್ಲಿ  ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಉಡುಪಿ; ವೇಗವಾಗಿ  ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಕಂಬಕ್ಕೆ  ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ.

ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಶಿರೂರು ಟೋಲ್ ಕಂಬಕ್ಕೆ  ಡಿಕ್ಕಿಯಾಗಿದೆ. ಪರಿಣಾಮ ಮೂವರು ಗಂಭೀರ ಗಾಯಗಳಾಗಿವೆ. ಆಂಬ್ಯುಲೆನ್ಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.  

ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!