Thursday, June 4, 2026
Homeಕರಾವಳಿಕಾಸರಗೋಡುಕಾಸರಗೋಡಿನಲ್ಲಿ ಅಂಬ್ಯುಲೆನ್ಸ್ ಹಾಗೂ ಕಾರು ಮಧ್ಯೆ ಅಪಘಾತ; ಮೂವರು ಸಾವು

ಕಾಸರಗೋಡಿನಲ್ಲಿ ಅಂಬ್ಯುಲೆನ್ಸ್ ಹಾಗೂ ಕಾರು ಮಧ್ಯೆ ಅಪಘಾತ; ಮೂವರು ಸಾವು

- Advertisement -
- Advertisement -

ಕಾಸರಗೋಡು; ಅಂಬ್ಯುಲೆನ್ಸ್ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ತ್ರಿಶ್ಯೂರು ಗುರುವಾಯೂರಿನ ಶ್ರೀನಾಥ್, ಶರತ್ ಮೆನೋನ್ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ.


ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಉಂಟಾಗಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಗೂ ಗಂಭೀರ ಗಾಯಗಳಾಗಿವೆ.

- Advertisement -

Latest News

error: Content is protected !!