Thursday, June 4, 2026
Homeಕರಾವಳಿಕೊರೋನಾದಿಂದ ಮೃತಪಟ್ಟ ಮಹಿಳೆಯ ಮೃತದೇಹ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿ

ಕೊರೋನಾದಿಂದ ಮೃತಪಟ್ಟ ಮಹಿಳೆಯ ಮೃತದೇಹ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿ

- Advertisement -
- Advertisement -

ಕಾಸರಗೋಡು: ಕೋವಿಡ್ ಸೋಂಕಿನಿಂದ ಮೃತಪಟ್ಟ ಪೊಯಿನಾಚಿಯ ವೃದ್ದೆಯ ಮೃತದೇಹವನ್ನು ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಆಸ್ಪತ್ರೆ ಆವರಣದ ಹೊಂಡಕ್ಕೆ ಬಿದ್ದ ಘಟನೆ ಕಾಸರಗೋಡು ಸರಕಾರಿ ಜನರಲ್ ಆಸ್ಪತ್ರೆ ಬಳಿ ನಡೆದಿದೆ.

ಮನೆಯಲ್ಲಿ ಕುಸಿದು ಬಿದ್ದಿದ್ದ ವೃದ್ಧೆಯನ್ನು ಕಾಸರಗೋಡಿನ ಜನರಲ್ ಆಸ್ಪತ್ರೆಗೆ ತಂದು ತಪಾಸಣೆ ನಡೆಸಿದಾಗ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿತ್ತು. ನಂತರ ವೃದ್ಧೆಯನ್ನು ಚಿಕಿತ್ಸೆಗೆ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದರು.

ಬಳಿಕ ಮೃತದೇಹವನ್ನು ಕೋವಿಡ್ ಮಾನದಂಡದಂತೆ ದಫನಕ್ಕೆ ಕೊಂಡೊಯ್ಯುತ್ತಿದ್ದಾಗ ಘಟನೆ ನಡೆದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!