Sunday, May 19, 2024
Homeತಾಜಾ ಸುದ್ದಿತನ್ನ ಮಗು ಜೀವನ್ಮರಣ ಹೋರಾಟ ನಡೆಸುತ್ತಿದ್ದರೂ ಆಂಬ್ಯುಲೆನ್ಸ್ ಓಡಿಸಿದ ಚಾಲಕ

ತನ್ನ ಮಗು ಜೀವನ್ಮರಣ ಹೋರಾಟ ನಡೆಸುತ್ತಿದ್ದರೂ ಆಂಬ್ಯುಲೆನ್ಸ್ ಓಡಿಸಿದ ಚಾಲಕ

spot_img
- Advertisement -
- Advertisement -

ಮೈಸೂರು: ತನ್ನ ಮಗು ಜೀವನ್ಮರಣ ಹೋರಾಟ ನಡೆಸುತ್ತಿದ್ದರೂ  ರೋಗಿಯೊಬ್ಬರನ್ನು ತನ್ನ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗ ಮೈಸೂರಿನಲ್ಲಿ ಚಾಲಕರೊಬ್ಬರು ಕರ್ತವ್ಯ ಮೆರೆದಿದ್ದಾರೆ.  

ಮೈಸೂರಿನ ಗೌಸಿಯಾನಗರದ ನಿವಾಸಿಯಾದ ಮುಬಾರಕ್ (25) ಅವರು ಮೊದಲಿಗೆ ಟೆಂಪೊ ಟ್ರಾವಲರ್‌ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಲಾಕ್‌ಡೌನ್‌ ನಂತರ ಇವರು ಬಿಜೆಪಿ ವತಿಯಿಂದ ನೀಡಲಾದ ಉಚಿತ ಆಂಬುಲೆನ್ಸ್‌ ಚಾಲಕರಾಗಿ ಸೇವೆ ಸಲ್ಲಿಸ ತೊಡಗಿದರು. ಈ ವೇಳೆ ಜೂನ್ 11ರಂದು ಇವರ ಮಗು ಸೈಯದ್ ಇಬ್ರಾಹಿಂ (2) ಆಟವಾಡುತ್ತಿರುವಾಗ ಸ್ನಾನಕ್ಕಾಗಿ ಆಗ ತಾನೆ ಹಂಡೆಯಿಂದ ಬಕೀಟ್‌ಗೆ ತೆಗೆದಿರಿಸಿದ್ದ ಬಿಸಿ ನೀರನ್ನು ತನ್ನ ಮೇಲೆ ಚೆಲ್ಲಿಕೊಂಡು ಗಂಭೀರವಾಗಿ ಗಾಯಗೊಂಡಿತು. ಕೂಡಲೇ ಮಗುವನ್ನು ಇವರು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು.

‘ಜೀವನ್ಮರಣದ ನಡುವೆ ಮಗು ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದ್ದರೂ ಕರೆ ಬಂದ ತಕ್ಷಣ ಇಲ್ಲಿನ ಸಿಗ್ಮಾ ಆಸ್ಪತ್ರೆಯಲ್ಲಿದ್ದ ರೋಗಿಯೊಬ್ಬರನ್ನು ಚಾಮರಾಜನಗರಕ್ಕೆ ತನ್ನ ಆಂಬ್ಯುಲೆನ್ಸ್ ನಲ್ಲಿ ನಿನ್ನೆ ರಾತ್ರಿ 9.30ಕ್ಕೆ ಕರೆದುಕೊಂಡು ಹೋಗುವ ಮೂಲಕ ಮುಬಾರಕ್ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಇವರು ಮಂಗಳವಾರ ನಸುಕಿನ ಹೊತ್ತಿಗೆ ವಾಪಸ್ ಬರುವಷ್ಟರಲ್ಲಿ ಇವರ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿತ್ತು’ ಎಂದು ಬಿಜೆಪಿಯ ಕೋವಿಡ್‌ ನೆರವಿನ ತಂಡದ ಸಂಚಾಲಕ ಜಯಶಂಕರ್ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮುಬಾರಕ್, ‘ನನಗೆ ರೋಗಿ ಮುಖ್ಯ. 2 ತಿಂಗಳಿನಿಂದ ಉಚಿತವಾಗಿ ಚಾಲನೆ ಮಾಡುತ್ತಿದ್ದೇನೆ. ಇದರಲ್ಲೇ ತೃಪ್ತಿ ಕಾಣುತ್ತಿದ್ದೇನೆ’ ಎಂದು ಪ್ರತಿಕ್ರಿಯಿಸಿದರು. ಮಗು ಮೃತಪಟ್ಟಿರುವ ಕುರಿತು ಇಲ್ಲಿನ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!