Friday, May 3, 2024
HomeUncategorizedಬಡವರು, ಮಧ್ಯಮ ವರ್ಗಕ್ಕೆ ಸಹಾಯವಾಗುವಂತೆ ಮರಳು ನೀತಿ ತಿದ್ದುಪಡಿ ಮಾಡಿ: ಗಣಿ ಇಲಾಖೆ ಅಧಿಕಾರಿಗಳಿಗೆ ಸಿಎಂ...

ಬಡವರು, ಮಧ್ಯಮ ವರ್ಗಕ್ಕೆ ಸಹಾಯವಾಗುವಂತೆ ಮರಳು ನೀತಿ ತಿದ್ದುಪಡಿ ಮಾಡಿ: ಗಣಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ

spot_img
- Advertisement -
- Advertisement -

ಬೆಂಗಳೂರು: ಗಣಿಗಳ ಆಧುನೀಕರಣಕ್ಕೆ ಉನ್ನತ ಮಟ್ಟದ ಸಮಿತಿಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ದೇಶಗಳಲ್ಲಿ ಗಣಿಗಾರಿಕೆಯ ಪರಿಕಲ್ಪನೆ, ಯಂತ್ರೋಪಕರಣ ಹಾಗೂ ಖನಿಜಾನ್ವೇಷಣೆಯಲ್ಲಿ ಆಧುನೀಕರಣವಾಗಿರುವ ನಿಟ್ಟಿನಲ್ಲಿ ಸಮಿತಿ ಗಂಭೀರವಾಗಿ ಚಿಂತನೆ ನಡೆಸಿ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸಿಎಂ ಸೂಚಿಸಿದ್ದಾರೆ.

ಅಲ್ಲದೇ ಬಡವರು ಮತ್ತು ಮಧ್ಯಮವರ್ಗದವರಿಗೆ ಸಹಾಯವಾಗುವಂತೆ ಮರಳು ನೀತಿಯನ್ನು ತಿದ್ದುಪಡಿ ಮಾಡುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಸಭೆಯಲ್ಲಿ ನಿರ್ದೇಶನ ನೀಡಿದ್ದಾರೆ.

ಇದೇ ವೇಳೆ ಕೆಲವರ ಕೈಯಲ್ಲಿರುವ ಮರಳು ಗಣಿಗಾರಿಕೆಯನ್ನು ಮುಕ್ತಗೊಳಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಸಿಎಂ ಅಭಿಪ್ರಾಯಪಟ್ಟಿದ್ದಾರೆ.

ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಎಂಎಸ್ಎಂಇ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!