ಕೊರೊನಾ ವೈರಸ್ ನಿಂದ ತತ್ತರಿಸಿ ಹೋಗಿರುವ ರಾಷ್ಟ್ರಗಳ ಪೈಕಿ ಅಮೆರಿಕಾ ಅಗ್ರಸ್ಥಾನದಲ್ಲಿದೆ. ಪ್ರತಿನಿತ್ಯ ಸಾವಿರಾರು ಜನರು ಮಾರಕ ಸೋಂಕಿಗೆ ತುತ್ತಾಗುತ್ತಿದ್ದಾರೆ. ಪ್ರಜೆಗಳನ್ನು ರಕ್ಷಿಸಿಕೊಳ್ಳಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ನೆರವು ಕೋರಿದ್ದಾರೆ.
ಅಮೆರಿಕಾದಲ್ಲಿ ಇರುವ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕಾಗಿ Hydroxychloroquine ಔಷಧವನ್ನು ರಫ್ತು ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿದ್ದೇವೆ ಎಂದು ಸ್ವತಃ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ದೂರವಾಣಿ ಮೂಲಕ ಭಾರತ ಪ್ರಧಾನಿ ಮೋದಿ ಜೊತೆಗೆ ಮಾತನಾಡಿದ್ದು ಕೊರೊನಾ ವೈರಸ್ ವಿರುದ್ಧ ಹೋರಾಟವನ್ನು ಅವರೂ ಕೂಡಾ ಗಂಭೀರವಾಗಿ ಪರಿಗಣಿಸಿದ್ದಾರೆ. ಹೈಡ್ರೋಕ್ಲೋರೊಕ್ವಿನ್ ಔಷಧಿ ಕುರಿತು ವೈದ್ಯರ ಬಳಿಯೂ ಚರ್ಚಿಸಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.
ಭಾರತವು ಕೊರೊನಾ ವೈರಸ್ ವಿರುದ್ಧ ಹೋರಾಡಲು ಶ್ರಮಿಸುತ್ತಿದೆ. ಕೋಟ್ಯಂತರ ಮಂದಿ ಪ್ರಜೆಗಳನ್ನು ರಕ್ಷಿಸಿಕೊಳ್ಳಲು ಭಾರತ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಮಲೇರಿಯಾಗೆ ಬಳಸುವ ಹೈಡ್ರೋಕ್ಲೋರೊಕ್ವಿನ್ ಔಷಧವನ್ನು ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳಲಾಗುತ್ತಿದೆ. ಭಾರತದ ಬಳ ಹೈಡ್ರೋಕ್ಲೋರೊಕ್ವಿನ್ ಔಷಧಿಯ ದಾಸ್ತಾನು ಸಾಕಷ್ಟಿದೆ. ಇದರಲ್ಲಿ ಅಮೆರಿಕಾಗೂ ಸ್ವಲ್ಪ ಔಷಧಿಯನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದೇವೆ ಎಂದು ಟ್ರಂಪ್ ತಿಳಿಸಿದ್ದಾರೆ.