Thursday, April 25, 2024
Homeತಾಜಾ ಸುದ್ದಿಹೆಚ್ಚುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆ; ಈ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ

ಹೆಚ್ಚುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆ; ಈ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ

spot_img
- Advertisement -
- Advertisement -

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ತಡೆ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಮಾರ್ಚ್ 28 ರಿಂದ ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬಾರ್, ಹೋಟೆಲ್, ಸಿನಿಮಾ ಮಂದಿರ, ಮಾಲ್ ಮೊದಲಾದ ವಾಣಿಜ್ಯ ಚಟುವಟಿಕೆಗಳು ಬಂದ್ ಆಗಲಿವೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಕೊರೊನಾ ವೈರಸ್‌ನಿಂದ ಅಪಾಯ ಎದುರಾಗುವುದು ಮುಗಿದಿಲ್ಲ. ಇದಕ್ಕೆ ಬದಲಾಗಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಜನರು ಇದನ್ನು ಅರ್ಥಮಾಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳು ಲಾಕ್‌ಡೌನ್ ವಿಧಿಸಬಹುದು. ಆದರೆ ಅವರು ಮೊದಲೇ ಜನರಿಗೆ ಸಾಕಷ್ಟು ಸಮಯವನ್ನು ನೀಡಬೇಕಾಗುತ್ತದೆ. ಹೆಚ್ಚುತ್ತಿರುವ ಪ್ರಕರಣಗಳು ಆತಂಕಕ್ಕೆ ಕಾರಣವಾಗಿದೆ. ಲಾಕ್‌ಡೌನ್ ಹೇರಲು ನಾನು ಬಯಸುವುದಿಲ್ಲ. ಆದಾಗ್ಯೂ, ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮೂಲಸೌಕರ್ಯಗಳು ಕಡಿಮೆಯಾಗಬಹುದು ಎಂದು ಸಿಎಂ ಕಚೇರಿ ಎಚ್ಚರಿಸಿದೆ.

- Advertisement -
spot_img

Latest News

error: Content is protected !!