Wednesday, June 24, 2026
Homeತಾಜಾ ಸುದ್ದಿಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ಕನ್ನಡದಲ್ಲೇ ಟ್ವೀಟ್ ಮಾಡಿ ಧನ್ಯವಾದ ಹೇಳಿದ ಅಮಿತ್ ಶಾ

ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ಕನ್ನಡದಲ್ಲೇ ಟ್ವೀಟ್ ಮಾಡಿ ಧನ್ಯವಾದ ಹೇಳಿದ ಅಮಿತ್ ಶಾ

- Advertisement -
- Advertisement -

 ನವದೆಹಲಿ: ರಾಜರಾಜೇಶ್ವರಿ ಹಾಗೂ ಶಿರಾ ಎರಡೂ ಕ್ಷೇತ್ರಗಳ ಪಚುನಾವಣೆಯಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಎರಡೂ ಕ್ಷೇತ್ರದ ಅಭ್ಯರ್ಥಿಗಳ ಗೆಲುವಿಗೆ ಕಾರಣವಾದ ಮತದಾರರಿಗೆ ಗೃಹ ಸಚಿವ ಅಮಿತಾ ಶಾ ಅಭಿನಂದನೆಯನ್ನು ತಿಳಿಸಿದ್ದಾರೆ.

ವಿಶೇಷ ಅಂದ್ರೆ ಅಮಿತಾ ಶಾ ಅವರು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಮತದಾರರಿಗೆ ಧನ್ಯವಾದವನ್ನು ಅರ್ಪಿಸಿದ್ದಾರೆ. ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ಚುನಾವಣೆ ಕಣದಲ್ಲಿದ್ದ ಮುನಿರತ್ನ 1,25,990 ಮತ ಪಡೆಯುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. 67,877 ಮತ ಪಡೆದಿದ್ದಾರೆ. ಇನ್ನು ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ಗೌಡ 76,564 ಮತ ಪಡೆದು ಐತಿಹಾಸಿಕ ದಾಖಲೆ ಬರೆದಿದ್ದಾರೆ.

- Advertisement -

Latest News

error: Content is protected !!