Wednesday, June 3, 2026
Homeಕರಾವಳಿನಾಳೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹೀಗಿರಲಿದೆ ಅಮಿತ್ ಶಾ ಕಾರ್ಯಕ್ರಮ

ನಾಳೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹೀಗಿರಲಿದೆ ಅಮಿತ್ ಶಾ ಕಾರ್ಯಕ್ರಮ

- Advertisement -
- Advertisement -

ಪುತ್ತೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ನಾಳೆ ದಕ್ಷಿಣ ಕನ್ನಡ‌ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ ಮಧ್ಯಾಹ್ನ ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಹನುಮಗಿರಿಯ ಪಂಚಮುಖಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದು ಪೂಜೆ ನೆರವೇರಿಸಲಿರುವ ಅಮಿತ್ ಷಾ, ಬಳಿಕ ಅಲ್ಲಿ ಭಾರತ್ ಮಾತಾ ಮಂದಿರದ ಉದ್ಘಾಟನೆ ಮಾಡಲಿದ್ದಾರೆ.

ಬಳಿಕ ಪುತ್ತೂರಿಗೆ ತೆರಳುವ ಅಮಿತ್ ಷಾ ಸಂಜೆ ವಿವೇಕಾನಂದ ಕಾಲೇಜಿನ ಮೈದಾನದಲ್ಲಿ ಕ್ಯಾಂಪ್ಕೊದ ಸ್ವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕ ಭಾಷಣ ಮಾಡಲಿದ್ದಾರೆ.

ಅನಂತರ ಮಂಗಳೂರಿನಲ್ಲಿ ಬಿಜೆಪಿ ಪೂರ್ವ ನಿಗದಿತ ಸಭೆಗಳಲ್ಲಿ ಭಾಗವಹಿಸಲಿರುವ ಅಮಿತ್ ಷಾ ನಂತರ ದೆಹಲಿಗೆ ವಾಪಸಾಗಲಿದ್ದಾರೆ.

- Advertisement -

Latest News

error: Content is protected !!