Friday, June 5, 2026
Homeತಾಜಾ ಸುದ್ದಿBIG BREAKING: ಕೇಂದ್ರ ಗೃಹಸಚಿವ ಅಮಿತ್ ಷಾಗೆ ಕೊರೋನಾ ಪಾಸಿಟಿವ್

BIG BREAKING: ಕೇಂದ್ರ ಗೃಹಸಚಿವ ಅಮಿತ್ ಷಾಗೆ ಕೊರೋನಾ ಪಾಸಿಟಿವ್

- Advertisement -
- Advertisement -

ನವದೆಹಲಿ: ಬಿಜೆಪಿಯ ನಿಕಟಪೂರ್ವ ರಾಷ್ಟ್ರಾಧ್ಯಕ್ಷ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಈ ಕುರಿತು ಸ್ವತಃ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ವೈದ್ಯಕೀಯ ವರದಿಯಿಂದ ನನಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ನಾನು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕೊರೋನಾ ಪಾಸಿಟಿವ್ ಇದ್ದರೂ ಆರೋಗ್ಯವಾಗಿದ್ದೇನೆ. ನನ್ನನ್ನು ಭೇಟಿಯಾಗಿದ್ದವರು ಪರೀಕ್ಷೆಗೊಳಗಾಗುವಂತೆ ಹಾಗೂ ಕ್ವಾರಂಟೈನ್’ಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

- Advertisement -

Latest News

error: Content is protected !!