Saturday, June 6, 2026
Homeಮನರಂಜನೆಅಮಿತಾಬ್ ಹಾಗೂ ಅಭಿಷೇಕ್ ಬಚ್ಚನ್ ಗೆ ಕೊರೊನಾ ಪಾಸಿಟಿವ್

ಅಮಿತಾಬ್ ಹಾಗೂ ಅಭಿಷೇಕ್ ಬಚ್ಚನ್ ಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಮುಂಬೈ: ಮಹಾನಗರಿ ಮುಂಬೈನಲ್ಲಿ ಕೊರೊನಾ ಆರ್ಭಟ ಹೇಗಿದೆ ಅನ್ನೋದು ನಿಮಗೆಲ್ಲಾ ಗೊತ್ತೆ ಇದೆ. ಇದೀಗ ಬಾಲಿವುಡ್ ನ ಹಿರಿಯ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಕುಟುಂಬವನ್ನು ಟಾರ್ಗೇಟ್ ಮಾಡಿದೆ ಕೋವಿಡ್-19. ಯೆಸ್. ಅಮಿತಾಬ್ ಬಚ್ಚನ್ ಹಾಗೂ ಅಭಿಷೇಕ್ ಅವರಿಗೆ ಕೊರೊನಾ ಪಾಸಿಟಿವ್ ಆಗಿರೋದು ಇದೀಗ ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಅಮಿತಾಬ್ , ಹೌದು ನನಗೆ ಕೊರೊನಾ ಪಾಸಿಟಿವ್ ಬಂದಿದೆ. ವೈದ್ಯಾಧಿಕಾರಿಗಳ ಸೂಚನೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಮನೆಯ ಇತರೆ ಸದಸ್ಯರ ಫಲಿತಾಂಶ ಇನ್ನು ಬರಬೇಕಿದೆ. ಅದಕ್ಕಾಗಿ ಕಾಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದರು.

ಆದರೆ ಇದರ ಬೆನ್ನಲ್ಲೇ ಇದೀಗ ಅವರ ಪುತ್ರ ಅಭಿಷೇಕ್ ಬಚ್ಚನ್ ಗೂ ಕೊರೊನಾ ಪಾಸಿಟಿವ್ ಅನ್ನೋ ವಿಚಾರ ಗೊತ್ತಾಗಿದೆ. ಗೊತ್ತಾಗುತ್ತಿದೆ ಅವರು ಕೂಡ ಟ್ವೀಟ್ ಮಾಡಿದ್ದಾರೆ. ನನಗೂ ನನ್ನ ತಂದೆಗೂ ಕೊರೊನಾದ ಚಿಕ್ಕಪುಟ್ಟ ಲಕ್ಷಣಗಳಿದ್ದವು. ಹಾಗಾಗಿ ನಾವು ಆಸ್ಪತ್ರೆಗೆ ದಾಖಲಾದೆವು. ಹಾಗೇ ಸಂಬಂಧಪಟ್ಟ ಅಧಿಕಾರಿಗಳಿಗೆ, ಹಾಗೇ ನಮ್ಮ ಕುಟುಂಬದ ಸದಸ್ಯರಿಗೆ, ಜೊತೆಗೆ ನಮ್ಮ ಸಿಬ್ಬಂದಿಗೂ ಮಾಹಿತಿ ನೀಡಿದ್ದೇವೆ ಅಂತಾ ಹೇಳಿದ್ದಾರೆ. ಅಲ್ಲದೇ ಎಲ್ಲದೇ ಎಲ್ಲಾ ಆರಾಮಾಗಿರಿ, ಧೈರ್ಯಗೆಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

- Advertisement -

Latest News

error: Content is protected !!