Wednesday, June 3, 2026
Homeಕರಾವಳಿಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನಕ್ಕೆ ಚಾಲನೆ

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನಕ್ಕೆ ಚಾಲನೆ

- Advertisement -
- Advertisement -

ಸುಳ್ಯ: ಆಜಾದಿ‌ ಕಾ ಅಮೃತ ಮಹೋತ್ಸವದ ಅಂಗವಾಗಿ ಸುಳ್ಯ ತಾಲೂಕಿನಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ ನಡೆಯಿತು.

ಬೆಳ್ಳಾರೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಎಸ್. ಅಂಗಾರ, ಶಾಸಕ ಸುರೇಶ್ ಕುಮಾರ್, ಅರೆಭಾಷೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಲಕ್ಷೀನಾರಾಯಣ ಕಜೆಗದ್ದೆ ಭಾಗವಹಿಸಿದ್ದರು.

ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ರಾಜಾಜಿನಗರ ಶಾಸಕ ಮತ್ತು ಮಾಜಿ ಸಚಿವ ಎಸ್. ಸುರೇಶ್ ಕುಮಾರ್, ಅಮರ ಸುಳ್ಯದ ಸ್ವಾತಂತ್ರ್ಯ ಹೋರಾಟದ ಕುರಿತಾಗಿ ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಸಾಂಸ್ಕೃತಿಕ ಕಲಾವಿದರು ಕೂಡಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ 75 ಸ್ಥಳಗಳಲ್ಲಿ ಇಂದು ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

- Advertisement -

Latest News

error: Content is protected !!