ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಬಹಿರಂಗವಾಗಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಾಗೆ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ .
ಫೆಬ್ರವರಿ 20 ರಂದು ನಡೆದ ಈ ಕಾರ್ಯಕ್ರಮದಲ್ಲಿ ಘೋಷಣೆ ಕೂಗಿ ದೇಶದ್ರೋಹ ಪ್ರಕರಣದಲ್ಲಿ ಬಂಧಿಯಾಗಿದ್ದಳು. ಇದೀಗ ಅಮೂಲ್ಯಾ ಲಿಯೋನಾಗೆ ಜಾಮೀನು ಸಿಕ್ಕಿದೆ.
ಪಾಕಿಸ್ತಾನದ ಪರ ಅಮೂಲ್ಯಾ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ಪೋಲೀಸರು ನಿಯಮದಂತೆ 90 ದಿನಗಳ ಒಳಗೆ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಬೇಕಿತ್ತು. ಆದರೆ, ಪೊಲೀಸರು ಅವಧಿ ಮೀರಿ ಜಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಆದ್ದರಿಂದ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಇಂದು ಅಮೂಲ್ಯಾ ಲಿಯೋನಾ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೂಲ್ಯ ಪರ ವಕೀಲರು ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್ ಇಂತಹ ಘಟನೆ ಮತ್ತೆ ಮರುಕಳಿಸಿಬಾರದು ಎಂದು ಜಾಮೀನು ಅರ್ಜಿಯನ್ನು ರದ್ದು ಮಾಡಲಾಗಿತ್ತು.