Sunday, June 7, 2026
Homeತಾಜಾ ಸುದ್ದಿಪಾಕಿಸ್ತಾನ ಪರ ಘೋಷಣೆ: ಜಾಮೀನು ಅರ್ಜಿ ವಾಪಸ್ ಪಡೆದ ಅಮೂಲ್ಯ ಲಿಯೋನ್

ಪಾಕಿಸ್ತಾನ ಪರ ಘೋಷಣೆ: ಜಾಮೀನು ಅರ್ಜಿ ವಾಪಸ್ ಪಡೆದ ಅಮೂಲ್ಯ ಲಿಯೋನ್

- Advertisement -
- Advertisement -

ಬೆಂಗಳೂರು, ಮೇ 25 : ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅಮೂಲ್ಯ ಲಿಯೋನ್ ಪರ ವಕೀಲರು ವಾಪಸ್ ಪಡೆದಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಅಮೂಲ್ಯ ಬಂಧನದಲ್ಲಿದ್ದಾರೆ.

ಅಮೂಲ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಬಂದಿತ್ತು. ಅರ್ಜಿದಾರರ ಪರ ವಕೀಲರು ಅರ್ಜಿ ವಾಪಸ್ ಪಡೆಯಲು ಅನುಮತಿ ನೀಡುವಂತೆ ಕೋರಿದರು.

ಅರ್ಜಿ ವಾಪಸ್ ಪಡೆಯಲು ಒಪ್ಪಿಗೆ ನೀಡಿದ ನ್ಯಾಯಪೀಠ, ಸೆಷನ್ಸ್ ನ್ಯಾಯಾಲಯದಲ್ಲಿ ಪರಿಹಾರ ಸಿಗದಿದ್ದರೆ ನಂತರ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿತು.

- Advertisement -

Latest News

error: Content is protected !!