Thursday, June 4, 2026
Homeಕರಾವಳಿಬೆಳ್ತಂಗಡಿ: ಇನೋವಾ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತ: 3 ಮಂದಿ ಗಂಭೀರ

ಬೆಳ್ತಂಗಡಿ: ಇನೋವಾ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತ: 3 ಮಂದಿ ಗಂಭೀರ

- Advertisement -
- Advertisement -

ಬೆಳ್ತಂಗಡಿ:  ಇನೋವಾ ಕಾರು ಹಾಗೂ ಡಿಕ್ಷಾ ನಡುವೆ ನಡೆದ ಅಪಘಾತದಲ್ಲಿ 3 ಮಂದಿ ಗಂಭೀರ ಗಾಯಗೊಂಡ  ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಬಳಿ ಮಾ. 24 ರಂದು ಸಂಜೆ ನಡೆದಿದೆ.

ಗುರುವಾಯನಕೆರೆಯಿಂದ ಕಾರ್ಕಳ ಕಡೆ ತೆರಳುತಿದ್ದ ಇನೋವಾ ಕಾರು ಪಿಲ್ಯ ಕುದ್ಯಾಡಿಯಿಂದ ಅಳದಂಗಡಿಗೆ ಬರುತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು ರಿಕ್ಷಾದಲ್ಲಿದ್ದ 3 ಮಂದಿಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯರು  ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

- Advertisement -

Latest News

error: Content is protected !!