Thursday, June 4, 2026
Homeಅಪರಾಧಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳ ನುಗ್ಗಿದ ಆಂಬುಲೆನ್ಸ್

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳ ನುಗ್ಗಿದ ಆಂಬುಲೆನ್ಸ್

- Advertisement -
- Advertisement -

ಮಣಿಪಾಲ: ಲಕ್ಷ್ಮೀಂದ್ರ ನಗರದ ಬಳಿಯಲ್ಲಿ ಮಣಿಪಾಲದಿಂದ ಉಡುಪಿಯ ಕಡೆಗೆ ತೆರಳುತ್ತಿದ್ದ ಆಂಬುಲೆನ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳ ನುಗ್ಗಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಚಾಲಕನ ಹೊರತು ಆಂಬುಲೆನ್ಸ್ ನಲ್ಲಿ ಯಾರು ಇರಲಿಲ್ಲ. ಲಕ್ಷ್ಮೀಂದ್ರ ನಗರದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಇದರಿಂದ ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!