Wednesday, June 24, 2026
Homeಕರಾವಳಿಉಡುಪಿಕುಂದಾಪುರ: ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಸೇನಾ ಟ್ರಕ್ ; ಕುಂದಾಪುರದ ಬೀಜಾಡಿಯ ಯೋಧ ಹುತಾತ್ಮ

ಕುಂದಾಪುರ: ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಸೇನಾ ಟ್ರಕ್ ; ಕುಂದಾಪುರದ ಬೀಜಾಡಿಯ ಯೋಧ ಹುತಾತ್ಮ

- Advertisement -
- Advertisement -

ಕುಂದಾಪುರ: ಸೇನಾ ಟ್ರಕ್ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಪರಿಣಾಮ, ಕುಂದಾಪುರದ ಬೀಜಾಡಿಯ ಯೋಧ ಅನೂಪ್ ಪೂಜಾರಿ (31) ಹುತಾತ್ಮ ಆಗಿದ್ದಾರೆ.

ಜಮ್ಮ ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ಟ್ರಕ್​ನಲ್ಲಿ ಯೋಧರು ಪ್ರಯಾಣಿಸುತ್ತಿದ್ದು, ಇದರಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಮೃತ ಪಟ್ಟಿದ್ದಾರೆ. ಅವರಲ್ಲಿ ಕುಂದಾಪುರದ ಅನೂಪ್ ಅವರು ಕೂಡ ಹುತಾತ್ಮರಾಗಿದ್ದಾರೆ.

ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಕಣಿವೆಗೆ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಡಿ.15 ರಂದು ಕೋಟೇಶ್ವರದಲ್ಲಿ ನಡೆದ ಕೊಡಿ ಹಬ್ಬದಲ್ಲಿ ಪಾಲ್ಘೊಂಡಿದ್ದಲ್ಲದೆ ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು. ಹುತಾತ್ಮ ಯೋಧ ತಾಯಿ, ಇಬ್ಬರು ಸಹೋದರಿಯರು, ಪತ್ನಿ, ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ನಾಳೆ (ಗುರುವಾರ) ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಕಲ್ಪಿಸಲಾಗುತ್ತದೆ. ಸಮಾಜ ಸೇವಕ ಅಶೋಕ್ ಪೂಜಾರಿ ಬೀಜಾಡಿ, ಬೀಜಾಡಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಗ್ರಾಮಸ್ತರ ನೇತೃತ್ವದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ಮಾಡಲಾಗುತ್ತಿದೆ.

- Advertisement -

Latest News

error: Content is protected !!