Saturday, May 11, 2024
Homeಅಪರಾಧಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ್ದ ಸಿಎಂ ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ; ಕಾರ್ಯಕರ್ತರನ್ನು...

ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ್ದ ಸಿಎಂ ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ; ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ್ದು, ಈ ಕೃತ್ಯ ಎಸಗಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನಲ್ಲಿ ಫೆ.17 ಶನಿವಾರದಂದು ನಡೆಯುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸುತ್ತಿದ್ದ ಸಿಎಂ ಅವರ ಕಾರಿಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೊಂದೇಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಪ್ರಯತ್ನಿಸಿದ್ದಾರೆ. 

ಘಟನೆಯ ಕುರಿತು ತಕ್ಷಣ ಕಾರ್ಯಪ್ರವರ್ತರಾದ ಪೊಲೀಸರು ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಕಾರ್ಯಕರ್ತರನ್ನು ವಶಕ್ಕೆ ಪಡೆದೆದಿದ್ದಾರೆ.

- Advertisement -
spot_img

Latest News

error: Content is protected !!