- Advertisement -
- Advertisement -
ಉಡುಪಿ: ಖಾಸಗಿ ಕಾಲೇಜೊಂದರ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಕ್ಟೋಬರ್ 16 ರಂದು ಇಂದ್ರಾಳಿಯ ಫ್ಲಾಟ್ ಒಂದರಲ್ಲಿ ಅತ್ಯಾಚಾರ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಇಬ್ಬರೂ ಪಾರ್ಟಿ ಮುಗಿಸಿ ಹಿಂತಿರುಗಿದ ವೇಳೆ ಸ್ನೇಹಿತನೇ ಸಹಪಾಠಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ವಿದ್ಯಾರ್ಥಿನಿಯು ಈ ಬಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಈ ಹಿನ್ನಲೆಯಲ್ಲಿ ಪೊಲೀಸರು ಆಕೆಯ ಸ್ನೇಹಿತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ ಎಂದು ಗುರುತಿಸಲಾಗಿದೆ.
- Advertisement -