Saturday, June 6, 2026
Homeಕರಾವಳಿಕಾರ್ಕಳ: ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ...!

ಕಾರ್ಕಳ: ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ…!

- Advertisement -
- Advertisement -

ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಕಾರ್ಕಳದಲ್ಲಿ ನಡೆದಿದೆ. ರವಳನಾಥ ಶರ್ಮಾ (32) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ ಎಂದು ತಿಳಿದುಬಂದಿದೆ.

ಇನ್ನು ಇವರು, ಎಂಬಿಎ ಪದವೀಧರರಾಗಿದ್ದು, 4 ವರ್ಷಗಳ ಹಿಂದೆ ಕಾರ್ಕಳದ ಎಂಪಿಎಂ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದರು. ಜೊತೆಗೆ ಇವರು ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆರ್ಚಕರಾಗಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇವರ ಆತ್ಮಹತ್ಯೆಗೆ ಕಾರಣಗಳೇನು ಎಂದು ಈವರೆಗೂ ತಿಳಿದು ಬಂದಿಲ್ಲ. ಮೃತರು ತಂದೆ ತಾಯಿ ಪತ್ನಿ ಹಾಗು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Latest News

error: Content is protected !!