Wednesday, May 15, 2024
Homeಕರಾವಳಿಉಡುಪಿಕಾರ್ಕಳ: 14ನೇ ಶತಮಾನಕ್ಕೆ ಸೇರಿದ ಶಾಸನ ಪತ್ತೆ

ಕಾರ್ಕಳ: 14ನೇ ಶತಮಾನಕ್ಕೆ ಸೇರಿದ ಶಾಸನ ಪತ್ತೆ

spot_img
- Advertisement -
- Advertisement -

ಕಾರ್ಕಳ: 14ನೇ ಶತಮಾನಕ್ಕೆ ಸೇರಿದ ಶಾಸನವೊಂದು ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಪ್ರದೇಶದ ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ ಪತ್ತೆಯಾಗಿದೆ.

ಕನ್ನಡ ಲಿಪಿ ಮತ್ತು ಭಾಷೆಯ 10 ಸಾಲುಗಳನ್ನು ಒಳಗೊಂಡಿರುವ ಈ ದಾನ ಶಾಸನವು 3 ಅಡಿ ಎತ್ತರ ಹಾಗೂ 2 ಅಡಿ ಅಗಲವನ್ನು ಹೊಂದಿದ್ದು, ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿದೆ.

ಉಡುಪಿಯ ಪ್ರಾಚ್ಯಸಂಚಯ ಸಂಶೋಧನ ಕೇಂದ್ರದ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಮತ್ತು ಯು.ಕಮಲಬಾಯಿ ಪ್ರೌಢಶಾಲೆ ಕಡಿಯಾಳಿ ಇದರ ನಿವೃತ್ತ ಶಿಕ್ಷಕ ಕೆ. ಶ್ರೀಧರ ಭಟ್ ಇವರ ಮಾರ್ಗದರ್ಶನದಲ್ಲಿ ಹೈದರಾಬಾದ್‌ನ ಫೀಚ್ ಇಂಡಿಯಾ ಫೌಂಡೇಶನ್‌ನ ಸಹಾಯಕ ಸಂಶೋಧಕ ರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಶಿಲಾಶಾಸನದ ಅಧ್ಯಯನ ನಡೆಸಿದ್ದಾರೆ.

- Advertisement -
spot_img

Latest News

error: Content is protected !!