Sunday, June 7, 2026
Homeಕರಾವಳಿಮಂಗಳೂರುಮಂಗಳೂರು:  ಲಂಚ ಪಡೆದು ಸಿಕ್ಕಿ ಬಿದ್ದು ಜಾಮೀನು ಪಡೆದು ಮತ್ತೆ ಅದೇ ಹುದ್ದೆಯಲ್ಲಿ ಮುಂದುವರೆದಿದ್ದ ಅಧಿಕಾರಿ...

ಮಂಗಳೂರು:  ಲಂಚ ಪಡೆದು ಸಿಕ್ಕಿ ಬಿದ್ದು ಜಾಮೀನು ಪಡೆದು ಮತ್ತೆ ಅದೇ ಹುದ್ದೆಯಲ್ಲಿ ಮುಂದುವರೆದಿದ್ದ ಅಧಿಕಾರಿ ಅಮಾನತು

- Advertisement -
- Advertisement -

ಮಂಗಳೂರು:  ಲಂಚ ಪಡೆದು ಸಿಕ್ಕಿ ಬಿದ್ದು ಜಾಮೀನು ಪಡೆದು ಮತ್ತೆ ಅದೇ ಹುದ್ದೆಯಲ್ಲಿ ಅಧಿಕಾರಿ ಮುಂದುವರೆದಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅವರನ್ನು ಅಮಾನತು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದೀಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಅಮಾನತು ಆದ ಅಧಿಕಾರಿ.


ಮನೆಕಟ್ಟಲು ಜಾಗದಲ್ಲಿದ್ದ ಕಲ್ಲನ್ನು ತೆಗೆಯಲು ಉಳ್ಳಾಲದ ವ್ಯಕ್ತಿಯೊಬ್ಬರು ಗಣಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು, ಆದರೆ ಅಧಿಕಾರಿ ಕೃಷ್ಣ ವೇಣಿ ತನ್ನ ಚಾಲಕನ ಮೂಲಕ ₹50 ಸಾವಿರ ಲಂಚ ಪಡೆದಿದ್ದರು. ಈ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಕೃಷ್ಣವೇಣಿ, ಕಚೇರಿ ಪ್ರಥಮ ದರ್ಜೆ ಸಹಾಯಕ ಪ್ರದೀಪ್ ಕುಮಾರ್ ಆರ್. ಹಾಗೂ ಚಾಲಕ ಮಧು ಸಿ. ಎಂಬುವರನ್ನು ಅರೆಸ್ಟ್ ಮಾಡಿದ್ದರು.

ಲಂಚ ಪಡೆದ ಆರೋಪದ ಮೇಲೆ 18 ದಿನ ಬಂಧನದಲ್ಲಿದ್ದ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸದೇ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ. ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಶಿಸ್ತುಕ್ರಮ ಕೈಗೊಳ್ಳಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿಗೆ ಶನಿವಾರ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಅಮಾನತು ಆದೇಶ ಹೊರಬಿದ್ದಿದೆ.

ಯಾವುದೇ ಅಧಿಕಾರಿ 48 ಗಂಟೆಗಿಂತ ಹೆಚ್ಚು ಸಮಯ ಬಂಧನದಲ್ಲಿದ್ದರೆ, ಅವರನ್ನು ಅಮಾನತು ಮಾಡಲು ಸರ್ಕಾರ ಕ್ರಮಕೈಗೊಳ್ಳುತ್ತದೆ. ಆದರೆ, ಕೃಷ್ಣವೇಣಿ ಅವರ ವಿಚಾರದಲ್ಲಿ ಈ ನಿಯಮ ಪಾಲನೆ ಆಗಿರಲಿಲ್ಲ. ಲಂಚ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಸಿಬ್ಬಂದಿ ಪ್ರದೀಪ್ ಅವರನ್ನು ಮೇ 28ರಂದೇ ಅಮಾನತುಗೊಳಿಸಲಾಗಿತ್ತು. ಚಾಲಕ ಮಧು ಹೊರಗುತ್ತಿಗೆ ನೌಕರನಾಗಿದ್ದರಿಂದ ಅಮಾನತು ಪ್ರಶ್ನೆ ಬರುವುದಿಲ್ಲ. ಕೃಷ್ಣವೇಣಿ ಅವರನ್ನು ಮೇ 28ರಿಂದಲೇ ಅನ್ವಯವಾಗುವಂತೆ ಅಮಾನತುಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ. ದಕ್ಷಿಣ ಕನ್ನಡ ಹಿರಿಯ ಭೂ ವಿಜ್ಞಾನಿಯಾಗಿ ಸಂದೀಪ್ ಜಿ.ಯು. ಅವರಿಗೆ ಪ್ರಭಾರ ಹೊಣೆ ವಹಿಸಲಾಗಿದೆ.

- Advertisement -

Latest News

error: Content is protected !!