Thursday, June 4, 2026
Homeಕರಾವಳಿಉಡುಪಿಉಡುಪಿ: ಸಬ್‌ ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಸಬ್‌ ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಉಡುಪಿ: ಒತ್ತಿನೆಣೆ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸದಾನಂದ ಸೇರಿಗಾರ್‌ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ. ಉಡುಪಿ ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಸದಾನಂದ ಸೇರಿಗಾರ್ ಮುಂಜಾನೆ ಸುಮಾರು 5 ಗಂಟೆಗೆ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದ. ಕುರುಪ್ ಸಿನಿಮಾ ಮಾದರಿಯಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಈತ ಸುಟ್ಟ ಕಾರಿನಲ್ಲಿ ತಾನೇ ಸತ್ತಿರುವುದಾಗಿ ಬಿಂಬಿಸಲು ಹೊರಟು ಬಂಧಿಯಾಗಿದ್ದ. ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರು ಒತ್ತಿನೆಣೆ ಹೇನ್ಬೇರ್‌ನಲ್ಲಿ ನಡೆದಿದ್ದ ಪ್ರಕರಣ ಇದಾಗಿತ್ತು.

- Advertisement -

Latest News

error: Content is protected !!