Sunday, June 7, 2026
Homeಕರಾವಳಿಬೆಳ್ತಂಗಡಿ : ಅಪರಿಚಿತ ವೃದ್ಧನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ: ಗಂಭೀರ ಗಾಯಗೊಂಡಿದ್ದ ವೃದ್ಧ...

ಬೆಳ್ತಂಗಡಿ : ಅಪರಿಚಿತ ವೃದ್ಧನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ: ಗಂಭೀರ ಗಾಯಗೊಂಡಿದ್ದ ವೃದ್ಧ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು ಗಾಯಾಳು ವೃದ್ಧ ಚಿಕಿತ್ಸೆ ಫಲಕಾರಿಯಾಗದೆ  ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಧರ್ಮಸ್ಥಳ ಶಾಂತಿವನದ ಸಮೀಪ ಘಟನೆ ನಡೆದಿದೆ.

 ಅಪಘಾತಕ್ಕೀಡಾದ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದು ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಅಪರಿಚಿತ ವ್ಯಕ್ತಿ ವಯಸ್ಸು 50 ರಿಂದ 60 ವರ್ಷ ಎಂದು ಅಂದಾಜಿಸಲಾಗಿದೆ. ಅವರ ವಿಳಾಸದ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.

 ಡಿಕ್ಕಿ ಹೊಡೆದ ವಾಹನ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ವಾಹನದ ಬಗ್ಗೆಯೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ವಾಹನದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!