Monday, June 8, 2026
Homeಕರಾವಳಿಸುಳ್ಯ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ನಿಧನ

ಸುಳ್ಯ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ನಿಧನ

- Advertisement -
- Advertisement -

ಸುಳ್ಯ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೆರಾಜೆ ನಿಡ್ಯಮಲೆಯ ಯುವಕ ಸಿನಿತ್ (26) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಏಪ್ರಿಲ್ 7 ರಂದು ಸಿನಿತ್ ಸುಳ್ಯದಿಂದ ಗುತ್ತಿಗಾರಿಗೆ ತೆರಳುತ್ತಿದ್ದ ವೇಳೆ ಬೈಕ್ ಕಂದಡ್ಕ ಸೇತುವೆಗೆ ಗುದ್ದಿ ಅಪಘಾತವಾಗಿತ್ತು. ಪರಿಣಾಮ ಸಿನಿತ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಇಂದು ಸಿನಿತ್ ಸಾವನ್ನಪ್ಪಿದ್ದಾರೆ.

ಮೃತ ಸಿನಿತ್ ತಂದೆ, ತಾಯಿ, ಅಣ್ಣ, ಅಕ್ಕ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!