Tuesday, July 1, 2025
HomeUncategorizedಮಂಗಳೂರು: ಸ್ಕೇಟಿಂಗ್‌ನಲ್ಲಿ ಸಾಧನೆ ಮಾಡಿದ ಅನಘಾ ರಾಜೇಶ್‌ ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ...

ಮಂಗಳೂರು: ಸ್ಕೇಟಿಂಗ್‌ನಲ್ಲಿ ಸಾಧನೆ ಮಾಡಿದ ಅನಘಾ ರಾಜೇಶ್‌ ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವ

spot_img
- Advertisement -
- Advertisement -

ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿ ಸ್ಕೇಟಿಂಗ್‌ನಲ್ಲಿ ಪ್ರಥಮ ಸ್ಥಾನ ಪಡೆದ ಅನಘಾ ರಾಜೇಶ್‌ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಅಸಾಧಾರಣ ಪ್ರತಿಭೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.



ದ.ಕ. ಜಿಲ್ಲಾಡಳಿತ, ಜಿ.ಪಂ. ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ‌ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ‌ ದಿನಾಚರಣೆ-2022 ಕಾರ್ಯಕ್ರಮವು ಜಿ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ನಡೆಯಿತು.


ಕಾರ್ಯಕ್ರಮದಲ್ಲಿ ದ.ಕ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಜಿ.ಪಂ. ಸಿಇಓ ಡಾ.ಕುಮಾರ ಮತ್ತಿತರು ಉಪಸ್ಥಿತರಿದ್ದರು.
ಅನಘಾ ತನ್ನ ನಾಲ್ಕನೇ ವಯಸ್ಸಿನಲ್ಲಿರುವಾಗಲೇ ಸ್ಕೇಟಿಂಗ್ ತರಬೇತಿ ಆರಂಭಿಸಿದ್ದರು. ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ಭಾಗವಹಿಸಿ ಒಟ್ಟು 26ಚಿನ್ನ, 11ಬೆಳ್ಳಿ ಹಾಗೂ 8 ಕಂಚಿನ ಪದಕ‌ ಪಡೆದು ತನ್ನ 12 ನೇ ವಯಸ್ಸಿನಲ್ಲೇ ಅತ್ಯುನ್ನತ ಸಾಧನೆ ಮಾಡಿದ್ದಾರೆ.


ಅನಘಾ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿ. ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ 6ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಅಂತರಾಷ್ಟ್ರೀಯ ಸ್ಕೇಟಿಂಗ್ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

- Advertisement -
spot_img

Latest News

error: Content is protected !!